ಧಾರವಾಡ ತಾಲ್ಲೂಕಿನ ಮುಗಳಿ ಗ್ರಾಮದ ವಿದ್ಯಾರ್ಥಿಗಳು ಸಮಪರ್ಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ದಿಡೀರ್
ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಗ್ರಾಮದ ನೂರಾರು ವಿದ್ಯಾರ್ಥಿಗಳು ನಿತ್ಯ ಶಾಲಾ-ಕಾಲೇಜುಗಳಿಗಾಗಿ ಧಾರವಾಡಕ್ಕೆ ತೆರಳುತ್ತಾರೆ. ಆದರೆ, ಸಕಾಲಕ್ಕೆ ಬಸ್ ಸೌಲಭ್ಯ ಇಲ್ಲದ ಕಾರಣ ಬಹಷ್ಟು ತೊಂದರೆ ಆಗುತ್ತಿದೆ.
ವಿದ್ಯಾರ್ಥಿಗಳ
ಬೇಡಿಕೆಗೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಸ್ಪಂದಿಸಬೇಕು ಎಂದು ಆಗ್ರಹಿಸಿದರು.
ಸುದ್ದಿ ತಿಳಿದ ಕೂಡಲೇ ಸ್ಥಳ ಕ್ಕೆ ಸಿಪಿಐ ಎಸ್.ಸಿ.ಪಾಟೀಲ ಅವರು ಸಾರಿಗೆ ಸಂಸ್ಥೆಯ ಅಧಿಕಾರಿಗಳ ನ್ನು ಕರೆಯಿಸಿ ಗ್ರಾಮಕ್ಕೆ ಸಕಾಲಕ್ಕೆ ಬಸ್ ಸೌಲಭ್ಯ ಕಲ್ಪಿ ಸುವ ಭರವಸೆ ನೀಡಿದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಸ್ಥಗಿತಗೊಳಿಸಿದರು.