ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಹುಬ್ಬಳ್ಳಿ ಕಚೇರಿ ಆವರಣದಲ್ಲಿರುವ ಸಭಾಂಗಣದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ ರವರ ಅಧ್ಯಕ್ಷತೆಯಲ್ಲಿ
ಅವಳಿ ನಗರಗಳ ಎಲ್ಲ ಹೋಟೆಲ್ ಉದ್ಯಮಿಗಳು, ಕಿರಾಣಿ, ಬೇಕರಿ ಹಾಗೂ ಇತರೆ ವರ್ತಕರೊಂದಿಗೆ *ಏಕ ಬಳಕೆ ಪ್ಲಾಸ್ಟಿಕ್ ನಿಷೇಧ* ದ ಬಗ್ಗೆ ಸಭೆಯನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಮುಖ್ಯ ಮಂತ್ರಿಗಳಾದ ಶ್ರೀ ಜಗದೀಶ ಶೆಟ್ಟರ ರವರು ಹಾಗೂ ವಿಧಾನಪರಿಷತ್ ಸದಸ್ಯರಾದ ಶ್ರೀ ಬಸವರಾಜ ಹೊರಟ್ಟಿ ರವರು ಪಾಲಿಕೆಯ ಸದಸ್ಯರಿಗೆ, ಅಧಿಕಾರಿಗಳಿಗೆ, ಹಾಗೂ ಪರಿಷತ್ ಸದಸ್ಯರಿಗೆ ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಉಪ ಮಹಾಪೌರರಾದ ಶ್ರೀಮತಿ ಉಮಾ ಮುಕುಂದ ರವರು,
ಪಾಲಿಕೆಯ ಸಭಾನಾಯಕರಾದ ಶ್ರೀ ತಿಪ್ಪಣ್ಣ ಮಜ್ಜಿಗಿ ರವರು, ಪಾಲಿಕೆಯ ಆಯುಕ್ತರಾದ ಶ್ರೀ ಗೋಪಾಲಕೃಷ್ಣ ರವರು, ಪಾಲಿಕೆಯ ಅಧಿಕಾರಿಗಳು ಹಾಗೂ ವರ್ತಕರು ಉಪಸ್ಥಿತರಿದ್ದರು.