*ತೀವ್ರ ಅಪೌಷ್ಟಿಕ ಹಾಗೂ ಸಾಧಾರಣ ಅಪೌಷ್ಟಿಕ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ*
*ಧಾರವಾಡ(ಕರ್ನಾಟಕ ವಾರ್ತೆ)ಸೆ.03*: ರಾಷ್ಟ್ರೀಯ ಪೋಷಣ ಅಭಿಯಾನ ಮಾಸಾಚರಣೆ ಅಂಗವಾಗಿ ಹುಬ್ಬಳ್ಳಿ-ಧಾರವಾಡ ಶಹರ ವಲಯದ ತೀವ್ರ ಅಪೌಷ್ಟಿಕ ಹಾಗೂ ಸಾಧಾರಣ ಅಪೌಷ್ಟಿಕ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಇಂದು ಧಾರವಾಡದ ಸಾರ್ವಜನಿಕ ಆಸ್ಪತ್ರೆ ಹಾಗೂ ಪ್ರಸೂತಿ ಹೆರಿಗೆ ಕೇಂದ್ರಗಳಲ್ಲಿ ಜರುಗಿತು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಸುರೇಶ ಇಟ್ನಾಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಾಯಿಂದಿರು ಮಕ್ಕಳ ಆರೋಗ್ಯ ಹಾಗೂ ಸ್ವಚ್ಚತೆಯ ಬಗ್ಗೆ ಕಾಳಜಿ ವಹಿಸಬೇಕು. ಮಕ್ಕಳಲ್ಲಿನ ಅಪೌಷ್ಟಿಕತೆ ಹೊಗಲಾಡಿಸಲು ಅಂಗನವಾಡಿ ಕೇಂದ್ರದಲ್ಲಿ ಲಭ್ಯವಿರುವ ಸೌಲಭ್ಯಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ಚಿಕ್ಕಮಕ್ಕಳ ತಜ್ಞರಾದ ಡಾ. ಟಿ.ಎ.ಶೇಪುರ ಮಾತನಾಡಿ, ಜಿಲ್ಲಾ ಆಸ್ಪತ್ರೆಯಲ್ಲಿರುವ ಪೌಷ್ಟಿಕ ಪುನಶ್ಚೇತನ ಕೇಂದ್ರದಲ್ಲಿ ಮಕ್ಕಳಿಗಾಗಿ ಸಿಗುವ ಸೌಲಭ್ಯಗಳು, ಮಕ್ಕಳ ಪೋಷಣೆ ಹಾಗೂ ಪೌಷ್ಟಿಕ ಆಹಾರದ ಬಗ್ಗೆ ತಾಯಂದಿರಿಗೆ ಅರಿವು ಮೂಡಿಸಿದರು.
ಡಾ. ಬಿ.ಪಿ.ಪೂಜಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಾ.ಹೆಚ್.ಹೆಚ್.ಕುಕನೂರ ಮಾತನಾಡಿದರು.
ಇದೆ ಸಂದರ್ಭದಲ್ಲಿ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ತೀವ್ರ ಅಪೌಷ್ಟಿಕ ಹಾಗೂ ಸಾಧಾರಣ ಅಪೌಷ್ಟಿಕ ಮಕ್ಕಳಿಗೆ ಚವನಪ್ರಾಶ್ ವಿತರಿಸಲಾಯಿತು.
ವೈದ್ಯಾಧಿಕಾರಿ ಡಾ.ಶೋಭಾ ಮೂಲಿಮನಿ, ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಹಾಗೂ ಶಿಶು ಅಭಿವೃದ್ಧಿ ಯೋಜನಾ ಕಛೇರಿಯ ಹುಬ್ಬಳ್ಳಿ-ಧಾರವಾಡ ಶಹರ ಯೋಜನೆಯ ಮಹಿಳಾ ಮೇಲ್ವಿಚಾರಕಿಯರು, ಹೆಚ್.ಡಿ.ಎಮ್.ಸಿ ವಲಯದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಹಾಜರಿದ್ದರು. ಮಹಿಳಾ ಮೇಲ್ವಿಚಾರಕಿ ಗಂಗಮ್ಮ ತುಮಗೇರಿ ಕಾರ್ಯಕ್ರಮ ನಿರೂಪಿಸಿದರು. ಹುಬ್ಬಳ್ಳಿ-ಧಾರವಾಡ ಶಹರ ಯೋಜನೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಾ. ಕಮಲವ್ವ ಬೈಲೂರು ವಂದಿಸಿದರು.
#STAR 74 NEWS PLEASE SUBSCRIBE AND LIKE