*ಶಿಶುಪಾಲನಾ ಕೇಂದ್ರ ಉದ್ಘಾಟಿಸಿದ ಸಚಿವರು*
ಧಾರವಾಡ (ಕರ್ನಾಟಕ ವಾರ್ತೆ)ನ.01:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಾಮಧೇನು ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟದ ಸಹಯೋಗದಲ್ಲಿ ಇಂದು ಬೆಳಿಗ್ಗೆ ಉದ್ಯೋಗಸ್ಥ ಮಹಿಳೆಯರ ಮಕ್ಕಳಿಗಾಗಿ ಇಲ್ಲಿನ ಜಿಲ್ಲಾ ಪೊಲೀಸ್ ಕ್ವಾರ್ಟಸ್ ಆವರಣದಲ್ಲಿ ಸ್ಥಾಪಿಸಲಾಗಿರುವ ಶಿಶುಪಾಲನಾ ಕೇಂದ್ರ ವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಉದ್ಘಾಟಿಸಿದರು .
ಮಕ್ಕಳ ಆರೈಕೆ,ಪೋಷಣೆ ಹಾಗೂ ಮನರಂಜನೆಗಾಗಿ ಕೇಂದ್ರದಲ್ಲಿ ಒದಗಿಸಲಾಗಿರುವ ಸೌಕರ್ಯಗಳನ್ನು ಪರಿಶೀಲಿಸಿದ ಸಚಿವರು,ಮಕ್ಕಳಿಗೆ ಹಾಲನ್ನು ಕುಡಿಸಿ ಸಂತಸ ಹಂಚಿಕೊಂಡಿದ್ದು ವಿಶೇಷವಾಗಿತ್ತು.
ಶಾಸಕ ಅಮೃತ ದೇಸಾಯಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯೆ ಅನೀತಾ ನಾರಾಯಣ ಚಳ್ಳಗೇರಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಪಂ ಸಿಇಓ ಡಾ.ಸುರೇಶ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್, ಧಾರವಾಡ ಉಪ ವಿಭಾಧಿಕಾರಿ ಅಶೋಕ ತೇಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಡಾ.ಹೆಚ್.ಹೆಚ್.ಕುಕನೂರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಪ್ರಭಾರ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಡಾ. ಕಮಲಾ ಬೈಲೂರು, ಸಂರಕ್ಷಣಾಧಿಕಾರಿಗಳು ಮಧುಮತಿ, ಡಿ.ವಾಯ್ .ಎಸ್.ಪಿ ಚಂದ್ರಕಾಂತ ಪೂಜಾರ, ಹೆಬ್ಬಳ್ಳಿ ಡಿ.ವ್ಹಿ ಆಕ್ಟ್ ವಲಯದ ಮೇಲ್ವಿಚಾರಕರಾದ ಗಂಗಮ್ಮ ಹಾಗೂ ಅಂಗನವಾಡಿ ಸಿಬ್ಬಂದಿ ವರ್ಗದವರು ಹಾಗೂ ಮತ್ತಿತರರು ಇದ್ದರು.
********