*ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಕೇಂದ್ರಗಳ ಆರಂಭಿಸಲು ಫ್ರಾಂಚೈಸಿಗಳಿಂದ ಅರ್ಜಿ ಆಹ್ವಾನ*
*ಧಾರವಾಡ (ಕರ್ನಾಟಕ ವಾರ್ತೆ) ಮಾ.14:* ಇ-ಆಡಳಿತ ಇಲಾಖೆಯಿಂದ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಉಳಿದಿರುವ ಕರ್ನಾಟಕ ಒನ್ 7 ಕೇಂದ್ರಗಳಲ್ಲಿ ಫ್ರಾಂಚೈಸಿಗಳನ್ನು ಆಯ್ಕೆ ಮಾಡಲು ಆನ್‍ಲೈನ್ https://www.karnatakaone.gov.in/Public/GramOneFranchiseeTerms ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಕೇಂದ್ರಗಳ ಸ್ಥಾಪನೆಗಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ಧಾರವಾಡದ ಶ್ರೀನಗರ(1), ತಡಸಿನಕೊಪ್ಪ (1) ಹಾಗೂ ಹುಬ್ಬಳ್ಳಿಯ ಸುತ್ತಗಟ್ಟಿ (1) ಮತ್ತು ಅಳ್ನಾವರ (2), ಕಲಘಟಗಿ(1), ಕುಂದಗೋಳ (1) ಹೀಗೆ ಒಟ್ಟು 6 ಸ್ಥಳಗಳಲ್ಲಿ 7 ಫ್ರಾಂಚೈಸಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಮಾರ್ಚ್ 20ರ ರಾತ್ರಿ 8 ಗಂಟೆಯವರೆಗೆ ಅವಕಾಶವಿರುತ್ತದೆ.. ಮತ್ತು ಅರ್ಜಿ ಸಲ್ಲಿಸಲು ಫ್ರಾಂಚೈಸಿ ಆಯ್ಕೆಗಾಗಿ ಪಿ.ಯು.ಸಿ., ಐ.ಟಿ.ಐ, ಡಿಪ್ಲೊಮಾ, ಪದವಿ, ಸ್ನಾತ್ತಕೋತ್ತರ ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಕರ್ನಾಟಕ ಒನ್ ಕೇಂದ್ರ ಸ್ಥಾಪಿಸಲು ಕನಿಷ್ಟ 100 ಚದರ ಅಡಿ ವಿಸ್ತೀರ್ಣವುಳ್ಳ ಸುಸಜ್ಜಿತ ಕಟ್ಟದೊಂದಿಗೆ ಕಂಪ್ಯೂಟರ್, ಪ್ರಿಂಟರ್, ಸ್ಕ್ಯಾನರ್, ಬಯೋಮೆಟ್ರಿಕ್ ಡಿವೈಸ್, ಮತ್ತು 8 ಗಂಟೆಗಳ ವಿದ್ಯುತ್ ಪರ್ಯಾಯ ವ್ಯವಸ್ಥೆ ಹಾಗೂ ಈಗಾಗಲೇ ಸರಕಾರದಿಂದ ಅಸ್ತಿತ್ವದಲ್ಲಿರುವ ಕರ್ನಾಟಕ ಒನ್ ಕೇಂದ್ರದಿಂದ ಸುಮಾರು 2 ಕಿ.ಮೀ ಅಂತರ ಹೊಂದಿರಬೇಕು.
ಅರ್ಜಿದಾರರು ಕೇಂದ್ರವನ್ನು ಸ್ಥಾಪಿಸಲು ಒಂದಕ್ಕಿಂತ ಹೆಚ್ಚು ಸ್ಥಳಗಳನ್ನು ಗುರುತಿಸಿದಲ್ಲಿ ಜಿಲ್ಲಾ ಕಾರ್ಯಪಡೆಯ ನಿರ್ಣಯ ಅಂತಿಮ ಮಾನದಂಡವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಹೆಲ್ಪ್‍ಡೆಸ್ಕ್ ಮೊಬೈಲ್ ಸಂಖ್ಯೆ: 8904084861, 8904084896, 8904085030ಗಳಿಗೆ ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ. ಹಾಗೂ ವಲಯ ಸಂಯೋಜ ಅನೀಸ್ ಅಹಮದ್‍ಅವರನ್ನು amk1@karnataka.gov.in ಹಾಗೂ 9845220135 ರಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.