ವಿವಿಧ ಬೇಡಿಕೆ ಈಡೇರಿಸುವಂತೆ ಡಲಿತ ವಿದ್ಯಾರ್ಥಿ ವರಿಷತ್ ವತಿಯಿಂದ ಸಚಿವರಿಗೆ ಮನವಿ
ಧಾರವಾಡ : ಪ. ಜಾ/ಪ. ಪಂ ವಿಧ್ಯಾರ್ಥಿಗಳಿಗೆ ಶಿಷ್ಯವೇತನ ಮಂಜೂರು ಮಾಡುವ ಜೊತೆಗೆ ಪ್ರಮುಖ ಕೆಲ ಬೇಡಿಕೆಗಳನ್ನು ಈಡೇರಿಸುವ ಕುರಿತು ಸಚಿವ ರಿಗೆ ಮನವಿ ಜಿಲ್ಹಾಧಿಕಾರಿಗಳ ಮುಖಾಂತರ ನೀಡಲಾಯಿತು
ಮೇಲ್ಕಾಣಿಸಿದ ಉಲ್ಲೇಖ 2018-19 ನೇ ಸಾಲಿನಿಂದ ಮ್ಯಾನೇಜ್ ಮೆಂಟ್ ಕೋಟಾದಡಿಯಲ್ಲಿ ಆಯ್ಕೆಯಾದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕಗಳನ್ನು ಪಾವತಿಸಬಾರದೆಂದು ಆದೇಶಿಸಿದೆ ಇದು ಸೂಕ್ತವಾದ ತೀರ್ಮಾನವಲ್ಲ.
ರಾಜ್ಯದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ 2019 ರಿಂದ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಕೋಟಾದಡಿಯಲ್ಲಿ ಪ್ರವೇಶ ಪಡೆದಿರುವ ಕಾರಣಕ್ಕಾಗಿ ಬಿಜೆಪಿ ಸರ್ಕಾರದಿಂದ ಶಿಷ್ಯವೇತನ ನಿಲ್ಲಿಸಿರುವುದರಿಂದ ಶೋಷಿತ ಸಮುದಾಯಗಳ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.
ರಾಜ್ಯದಲ್ಲಿ ಹಲವಾರು ವೃತ್ತಿಪರ ಕೋರ್ಸ್ ಗಳು ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಹಾಗೂ ಅನುದಾನ ರಹಿತ ಶಾಲಾ ಕಾಲೇಜುಗಳಲ್ಲಿ ಆಡಳಿತ ಮಂಡಳಿ ಕೋಟಾದಲ್ಲಿಯೇ ಹೆಚ್ಚಾಗಿ ಇರುತ್ತದೆ.
ಇದೆ ಕಾರಣಕ್ಕಾಗಿ ಈ ಕೋರ್ಸ್ ಕಲಿಯಬೇಕಾದರೆ ಅನಿವಾರ್ಯವಾಗಿ ವಿದ್ಯಾರ್ಥಿಗಳು ಖಾಸಗಿ ಕೋಟಾದಡಿಯಲ್ಲಿಯೇ ಪ್ರವೇಶ ಪಡೆಯಬೇಕಾಗುತ್ತದೆ. ಅಂತಹ ವಿದ್ಯಾರ್ಥಿಗಳಿಗೆ ಶಿಷ್ಯವೇತನ ದೊರೆಯದಿದ್ದರೆ ಈ ಸಮುದಾಯಗಳ ವಿದ್ಯಾರ್ಥಿಗಳು ಶಿಕ್ಷಣ ದಿಂದ ವಂಚಿತರಾಗಬೇಕಾಗಬೇಕಾಗುತ್ತದೆ, ಕೂಡಲೇ ಈ ವಿದ್ಯಾರ್ಥಿಗಳಿಗೂ ಶಿಷ್ಯ ವೇತನ ದೊರೆಯುವಂತೆ ಸರ್ಕಾರ ಕ್ರಮ ವಹಿಸುವ ಜೊತೆಗೆ , ಸೂಚಿಸಿದ ಬೇಡಿಕೆಗಳನ್ನು ಈಡೇರಿಸುವಂತೆ ದಲಿತ ವಿದ್ಯಾರ್ಥಿ ಪರಿಷತ್ ಧಾರವಾಡ ಜಿಲ್ಲಾ ಘಟಕದ ವತಿಯಿಂದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಮನವಿ ಪತ್ರ ನೀಡಿದರು
ಬೇಡಿಕೆಗಳು :
ಓದಲು ಪ್ರವೇಶ ಪಡೆದ ಪ್ರತಿ ವಿದ್ಯಾರ್ಥಿಗಳಿಗೂ ಶಿಷ್ಯವೇತನ ಮಂಜೂರು ಮಾಡಬೇಕು.
ವಸತಿ ನಿಲಯಗಳಲ್ಲಿ ಪ್ರವೇಶ ಪಡೆಯುವ ಪ್ರತಿ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ಕೊಡಬೇಕು. ಹಾಗೇಯೇ ಇಲಾಖೆ ಮೂಲಕ ವಿದ್ಯಾರ್ಥಿಗಳಿಗೆ ಈಗಾಗಲೇ ಲ್ಯಾಪ್‌ಟಾಪ್ ವಿತರಣೆಗೆ ಮಾಡುವ ಕಾರ್ಯ ಸ್ಥಗಿತಗೊಂಡಿದ್ದು, ಅದನ್ನು ಪುನಃ ಆರಂಭಿಸಬೇಕು.
ಪ್ರತಿ ವಸತಿನಿಲಯಗಳಲ್ಲಿ ಶೈಕ್ಷಣಿಕ ಪೂರಕ ಕೆಂದ್ರವಾಗಿ ನಿರ್ಮಾಣ ಮಾಡಬೇಕು.
ಪ್ರತಿ ವಸತಿ ನಿಲಯಗಳಲ್ಲಿ ಸ್ಪೋಕನ್ ಇಂಗ್ಲಿಷ್ ತರಬೇತಿ ಹಾಗೂ ಬೇಸಿಕ್ ಕಂಪ್ಯೂಟರ್ ಕೋರ್ಸ್ ಮೂಲಕ ತರಬೇತಿ ನೀಡಬೇಕು.
ಪ್ರತಿ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಪಾಲಕರು ಹಾಗೂ ಇಲಾಖೆಯ ಅಧಿಕಾರಿಗಳೂ ಒಳಗೊಂಡಂತೆ ವಸತಿ ನಿಲಯ ಮೇಲುಸ್ತುವಾರಿ ಸಮಿತಿ ರಚಿಸಿ, ವಸತಿ ನಿಲಯಗಳಲ್ಲಿ ಶಿಸ್ತು ಕಾಪಾಡಬೇಕು.
ವಸತಿ ನಿಲಯ ಮೇಲುಸ್ತುವಾರಿ ಸಮಿತಿ ಸಭೆ ಕಡ್ಡಾಯವಾಗಿ ಪ್ರತಿ ತಿಂಗಳು ನಡೆಯುವಂತೆ ನೊಡಿಕೊಳ್ಳಬೇಕು.
ವಸತಿ ನಿಲಯಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಗ್ರಂಥಾಲಯ ತೆರೆಯಬೇಕು.
ಪ್ರಸ್ತುತ ಬೆಲೆ ಏರಿಕೆ ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳ ಶಿಷ್ಯವೇತನ ಶೇ 50% ಏರಿಕೆ ಮಾಡಬೇಕು.
ಪ್ರತೀ ಹಾಸ್ಟೆಲ್ ನಲ್ಲಿ ಊಟ ಉಪಹಾರದ ಮುಂಚೆ ಸಂವಿಧಾನ ಪ್ರಸ್ತಾವನೆಯನ್ನು ಓದಬೇಕು.
ವಸತಿ ನಿಲಯದ ವಿದ್ಯಾರ್ಥಿಗಳಿಗೆ ಸರಿಯಾಗಿ ಕಿಟ್ಗಳು ವಿತರಣೆಯಾಗಬೇಕು ಮತ್ತು ವಿದ್ಯಾರ್ಥಿನಿಯರಿಗೆ ಪ್ರತೀ ತಿಂಗಳು ತಪ್ಪದೇ ಸ್ಯಾನಿಟೈಸರ್ ಕಿಟ್ಗಳು ದೊರೆಯಬೇಕು.
ಪದವಿ ಮತ್ತು ಸ್ನಾತಕೋತ್ತರ ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಕೆಸೆಟ್, ಯುಜಿಸಿ ನೆಟ್, ಟಿಇಟಿ, ಸಿಇಟಿ, ಜಿಪಿಎಸ್ ಟಿಆರ್, ಎಚ್ಎಸ್ಟಿಆರ್ ಪುಸ್ತಗಳು ಗ್ರಂಥಾಲಯದಲ್ಲಿ ದೊರೆಯಬೇಕು.
ಪ್ರತೀ ತಿಂಗಳು ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿಗಗಳು ವಿದ್ಯಾರ್ಥಿಗಳಿಗೆ ದೊರೆಯುವಂತಾಗಬೇಕು.
ಪ್ರತೀ ತಿಂಗಳು ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಶಿಕ್ಷಣದ ಕುರಿತು ಕಾರ್ಯಗಾರ ನಡೆಸಬೇಕು.
ಪ್ರತೀ ವಸತಿ ನಿಲಯದ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ತುತ್ತಾದಾಗ ಉಚಿತ ಚಿಕಿತ್ಸೆಗಾಗಿ ವೈದ್ಯರನ್ನು ನೇಮಿಸಬೇಕು.
ಪ್ರತೀ ವಸತಿ ನಿಲಯದಲ್ಲಿ ಶುಚಿತ್ವ ಮತ್ತು ಕುಡಿಯುವ ನೀರಿನ ಶುದ್ಧಿಕರಣ ಘಟಕವನ್ನು ನೇಮಿಸಬೇಕು ಮತ್ತು ಗುಣಮಟ್ಟದ ಆಹಾರವನ್ನು ನೀಡಬೇಕು.
ಪದವಿ,ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮ ಕೋರ್ಸ್ ಗಳ ಪ್ರವೇಶ ಶುಲ್ಕ 2018-19ರ ಸಾಲಿನ ನಿಯಮದಂತೆ ನಿರ್ಧರಿಸಬೇಕು.
ವಿಶ್ವವಿದ್ಯಾಲಯ ಅಧೀನಕ್ಕೆ ಒಳಪಡುವ ವಸತಿ ನಿಲಯಗಳಲ್ಲಿ ವಾಸಿಸುವ ಪ. ಜಾತಿ/ ಪ. ಪಂಗಡದ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಕಡಿತಗೊಳಿಸಬೇಕು. ವಿಶ್ವ ವಿದ್ಯಾಲಯ ಮಟ್ಟದಲ್ಲಿ ಇಂದಿರಾ ಕ್ಯಾಂಟೀನ್ ವ್ಯವಸ್ಥೆಯನ್ನು ಮಾಡಬೇಕು.
ಸ್ನಾತಕೋತ್ತರ ವಿದ್ಯಾರ್ಥಿಗಳು ಮಾಡುವ ಕ್ಷೇತ್ರಕಾರ್ಯ ಅಧ್ಯಯನ ವರದಿಗಾಗಿ ರೂ.10,000 ವರೆಗೆ ಹೆಚ್ಚಿಸಬೇಕು.
ವಿಶ್ವವಿದ್ಯಾಲಯಕ್ಕೆ ಒಳಪಡುವ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಮಾಸಿಕ ಶಿಷ್ಯವೇತನ(ಸ್ಟೈಫೆಂಡ್)ವನ್ನು ಇಂದಿನ ಮಾರುಕಟ್ಟೆಯ ದರದ ಆಧಾರದ ಮೇಲೆ ರೂ.5000 ವರೆಗೆ ಹೆಚ್ಚಿಸಬೇಕು.
ಕಾನೂನು ವಿದ್ಯಾರ್ಥಿಗಳಿಗೆ ಮಾಸಿಕ ಶಿಷ್ಯವೇತನ ಸ್ಥಗಿತಗೊಂಡಿದ್ದು ಇಂದಿನ ಮಾರುಕಟ್ಟೆ ದರದ ಆಧಾರದ ಮೇಲೆ ಶಿಷ್ಯವೇತನವನ್ನು ಮರು ನಿಗದಿ ಪಡಿಸಬೇಕು.
ಮ್ಯಾನೇಜ್ ಮೆಂಟ್ ಕೋಟಾದಡಿಯಲ್ಲಿ ಪ್ರವೇಶ ಪಡೆದ ಪದವಿ, ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವಸೌಲಭ್ಯ ಹಾಗೂ ಶಿಷ್ಯವೇತನ ಮಂಜೂರು ಮಾಡಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಧಾರವಾಡ ಜಿಲ್ಲಾ ಘಟಕದ ಪದಾಧಿಕಾರಿಗಳು ಮನವಿ ಪತ್ರ ನೀಡಿದರು.
ಈ ವೇಳೆ ಜಿಲ್ಲಾ ಅಧ್ಯಕ್ಷ ಹನುಮಂತ ದಾಸರ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಹಾಸಟ್ಟಿ, ಕಾನೂನು ಸಲಹೆಗರರಾದ ಶಾಂತಯ್ಯ ಓಸುಮಠ,ಸಂಗಮೇಶ ಬನಸೋಡೆ, ದೇವರಾಜ ದೊರೆ, ವಿನಯ್ ದೊಡ್ಡಮನಿ ಮುಂತಾದವರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹಿರಾತುಗಾಗಿ ಸಂಪರ್ಕಿಸಿ:9945564891