ಬಿಜೆಪಿ ಸರ್ಕಾರದ ಅವಧಿಯಲ್ಲಿ 40 ಸಾವಿರ ಕೋಟಿ ಹಗರಣವನ್ನು ತನಿಖೆಗೆ ಆಗ್ರಹ.
ಧಾರವಾಡ 03:
ಕೋವಿಡ್ ಸಮಯದಲ್ಲಿ ನಡೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ 40 ಸಾವಿರ ಕೋಟಿ ಹಗರಣವನ್ನು ತನಿಖೆ ಮಾಡಬೇಕೆಂದು ಆಗ್ರಹಿಸಿ.
ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳರವರು ಬಿಜೆಪಿ ಸರ್ಕಾರದ ಅಧಿಕಾರದ ಅವದಿಯಲ್ಲಿ ಕೋವಿಡ್ ಸಮಯದಲ್ಲಿ 40 ಸಾವಿರ ಕೋಟಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪಿಸಿರುತ್ತಾರೆ, ಅದನ್ನು ಈಗಿನ ರಾಜ್ಯ ಸರ್ಕಾರ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಇದನ್ನು ಸರ್ಕಾರದ ವತಿಯಿಂದ ವಿಶೇಷ ತನಿಖಾ ತಂಡ ರಚನೆ ಮಾಡಿ ಆ ಸಮಯದಲ್ಲಿ ಖರ್ಚು ವೆಚ್ಚ ಮಾಡಿದ ದಾಖಲಾತಿಗಳನ್ನು ಪರಿಶೀಲನೆ ಮಾಡಿ ರಾಜ್ಯದ ಜನತೆಗೆ ಇದನ್ನ ನೈಜ್ಯ ಚಿತ್ರಣವನ್ನು ತೋರಿಸಬೇಕು, ಹಾಗೂ ಈ ಹಗರಣದಲ್ಲಿ ಭಾಗಿಯಾದ ಹಿಂದಿನ ಬಿಜೆಪಿ ಸರ್ಕಾರದ ಸಚಿವ,ಶಾಸಕ, ಹಾಗೂ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಬಕೆಂದು, ಕರ್ನಾಟಕ ಪ್ರದೇಶ ಕಾಂಗ್ರೆಸ ಸಮಿತಿ ಧಾರವಾಡ 71 ಗ್ರಾಮೀಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಈಶ್ವರ ಶಿವಳ್ಳಿ ಮನವಿ ಮಾಡಿದರು .