ಮಸ್ಟರಿಂಗ್ ಕೇಂದ್ರದಲ್ಲಿ ಚುನಾವಣಾ ಸಿಬ್ಬಂದಿಗಳ ನಿಯೋಜನೆ -- ಜಿಲ್ಲಾಧಿಕಾರಿ ಬೇಟಿ ಪರಿಶೀಲನೆ
ಧಾರವಾಡ:-- ಧಾರವಾಡ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ ಹಾಗೂ ಧಾರವಾಡ ವಿಧಾನಸಭಾ
ಕ್ಷೇತ್ರದ ಮಸ್ಟರಿಂಗ್ ಕೇಂದ್ರದಲ್ಲಿ ಚುನಾವಣಾ ಸಿಬ್ಬಂದಿ ತಮ್ಮ ಇವಿಎಂ ಯಂತ್ರವನ್ನು ಇಂದು ಪರಿಶೀಲನೆ ಮಾಡಿಕೊಂಡರು.
ಇಲ್ಲಿಯ ಬಾಸಲ್ ಮಿಷನ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪಶ್ಚಿಮ ವಿಧಾನಸಭಾ ಕ್ಷೇತ್ರದ
ಹಾಗೂ ಟೌನ್ ಹಾಲ್ ದಲ್ಲಿ ಧಾರವಾಡ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕೇಂದ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜನೆ ಮಾಡಲಾಯಿತು.
ಈ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಆದ ದಿವ್ಯ ಪ್ರಭು ಬೇಟಿನೀಡಿ ಪರಿಶೇಲನೆ ನಡೆಸಿ ಸರಿಯಾಗಿ ಕತ೯ವ್ಯ ನಿವ೯ಹಿಸಬೇಕು ಯಾವುದೇ ಗೊಂದಲಗಳಿಗೆ ಆಸ್ಪದ ಕೊಡಬಾರದು ಎಂದು ಸಿಬ್ಬಂದಿಗಳಿಗೆ ಸೂಚನೆ ನೀಡಿದರು.