ಕಳಪೆ ಆಹಾರ ಪೂರೈಕೆ , ಹಾಸ್ಟೆಲ್ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು
ಧಾರವಾಡ 22 :---ತಿನ್ನಲು ಆಗದೇ ಇರುವ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡಲಾಗುತ್ತಿದೆ ಹಾಗೂ ಆಹಾರ ತಯಾರಿಕೆಯಲ್ಲಿ ಸುರಕ್ಷತಾ ಕ್ರಮ ಅನುಸರಿಸುತ್ತಿಲ್ಲ ಎಂದು ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶf ವ್ಯಕ್ತಪಡಿಸಿದ ಘಟನೆ ನಗರದಲ್ಲಿ ನಡೆಯಿತು.
ಆಹಾರ ತಯಾರಿಕೆ ಮಾಡುವ ಸಿಬ್ಬಂದಿ ನಿರ್ಲಕ್ಷ್ಯ ಖಂಡನೀಯ , ಉತ್ತಮ ಗುಣಮಟ್ಟದ ಆಹಾರ ನೀಡಿ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಪ್ರಶ್ನಿಸಿದರೆ ನಮ್ಮ ಮೇಲೆ ಹಲ್ಲೆಗೆ ಮುಂದಾಗುತ್ತಾರೆ ಎಂದು ಹಾಸ್ಟೆಲ್ ವಿದ್ಯಾರ್ಥಿಗಳು ಅಸಮದಾನ ವ್ಯಕ್ತಪಡಿಸಿದರು .
ತಿನ್ನಲು ಆಗದೇ ಇರುವ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡಲಾಗುತ್ತಿದೆ . ಹಲವಾರು ಬಾರಿ ಮೇಲಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.
ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಎಂ.ಬಿ ಸನ್ನೇರಿ ವಿದ್ಯಾರ್ಥಿಗಳ ಅಹವಾಲು ಆಲಿಸಿದರು . ಹಾಸ್ಟೆಲ್ ವಾರ್ಡನ್ ಬದಲಾವಣೆ ಮಾಡುತ್ತೇವೆ ಗುಣಮಟ್ಟದ ಆಹಾರ ವ್ಯವಸ್ಥೆ ಮಾಡುತ್ತೇನೆ ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು .
ಆಕ್ರೋಶ ಭರಿತ ವಿದ್ಯಾರ್ಥಿಗಳು ಈ ಕೂಡಲೇ ಸೂಕ್ತ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು .