ಶ್ರೀ ರಂಭಾಪುರಿ ಜಗದ್ಗುರುಗಳವರ ಜುಲೈ-ಆಗಸ್ಟ್ ಮಾಹೆಯ ಪ್ರವಾಸ ವಿವರ
ಹುಬ್ಬಳ್ಳಿ ಜೂನ್-28.
ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರ 2024ನೇ ಸಾಲಿನ ಜುಲೈ ಹಾಗೂ ಆಗಸ್ಟ್ ಮಾಹೆಯ ಪ್ರವಾಸ ಕಾರ್ಯಕ್ರಮ ಈ ಕೆಳಗಿನಂತಿದೆ.
ಜುಲೈ 3ರಂದು ಶಿವಮೊಗ್ಗದಲ್ಲಿ ಶ್ರೀ ರಂಭಾಪುರೀಶ ನಿವಾಸ ನೂತನ ಕಟ್ಟಡ ಉದ್ಘಾಟನೆ, 5ರಂದು ಹಾಸನ ಜಿಲ್ಲೆ ಆಲೂರು ತಾಲೂಕ ಕಾರ್ಜುವಳ್ಳಿಯಲ್ಲಿ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಸಮಾರಂಭ, 6ರಂದು ಬೇಲೂರು ತಾಲೂಕ ಬಿಕ್ಕೋಡು ಗ್ರಾಮದಲ್ಲಿ ಪುರ ಪ್ರವೇಶ ಹಾಗೂ ಧರ್ಮ ಸಮಾರಂಭ, 7ರಂದು ಶಿವಮೊಗ್ಗದಲ್ಲಿ ಇಷ್ಟಲಿಂಗ ಮಹಾಪೂಜಾ ಹಾಗೂ ಶಿವದೀಕ್ಷಾ ಸಮಾರಂಭ, 8ರಂದು ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕ ಹನುಮಾಪುರ ಗ್ರಾಮದಲ್ಲಿ ಲಿಂ.ಸದಾನಂದ ಶ್ರೀಗಳ 4ನೇ ವರ್ಷದ ಪುಣ್ಯಾರಾಧನಾ ಸಮಾರಂಭದ ಸಾನ್ನಿಧ್ಯ ವಹಿಸುವರು. ದಿನಾಂಕ 9ರಿಂದ 11ರ ವರೆಗೆ ಹರಿಹರದಲ್ಲಿ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಜಾಗೃತಿ ಸಮಾರಂಭ, 12ರಂದು ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕ ಲೋಕಾಪುರದಲ್ಲಿ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಸಮಾರಂಭ ನಡೆಸುವರು. ದಿನಾಂಕ 14ರಂದು ತುಮಕೂರು ಜಿಲ್ಲೆ ಗುಬ್ಬಿ ತಾಲೂಕ ನಿಟ್ಟೂರಿನಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಸಭಾ ಭವನ ಉದ್ಘಾಟನಾ ಸಮಾರಂಭ, 17ರಂದು ಬೀದರ ಜಿಲ್ಲೆ ಮುಧೋಳ(ಬಿ) ಗ್ರಾಮದಲ್ಲಿ ಲಿಂ.ಶಿವಲಿಂಗ ಶಿವಾಚಾರ್ಯರ ಲಿಂಗಾಂಗ ಸಾಮರಸ್ಯದ ಶತಮಾನೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸುವರು. ದಿನಾಂಕ 21ರಂದು ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಗುರು ಪೌರ್ಣಿಮಾ ಸಮಾರಂಭದಲ್ಲಿ ಪಾಲ್ಗೊಂಡು ಭಕ್ತಾದಿಗಳಿಗೆ ದರ್ಶನಾಶೀರ್ವಾದ ನೀಡುವರು. ದಿನಾಂಕ 24ರಿಂದ 28ರ ವರೆಗೆ ಬೆಂಗಳೂರು ಮಹಾನಗರದಲ್ಲಿ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಸಮಾರಂಭ, ಜುಲೈ 29ರಿಂದ ಆಗಸ್ಟ್ 3ರ ವರಗೆ ದಾವಣಗೆರೆಯಲ್ಲಿ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಜಾಗೃತಿ ಸಮಾರಂಭ ನಡೆಸುವರು. ಆಗಸ್ಟ್ 4ರಂದು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕ ತಾವೆರೆಕೆರೆ ಶಿಲಾಮಠದಲ್ಲಿ ಲಿಂ.ಸಿದ್ಧಲಿಂಗ ಶ್ರೀಗಳವರ ಪುಣ್ಯ ಸ್ಮರಣೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಆಗಸ್ಟ್ 5ರಿಂದ ಸಪ್ಟಂಬರ್ 2ರ ವರೆಗೆ ಬಾಳೆಹೊನ್ನೂರು ಧರ್ಮ ಪೀಠದಲ್ಲಿ ವಾಸ್ತವ್ಯ ಇದ್ದು ತಮ್ಮ 33ನೇ ವರ್ಷದ ಶ್ರಾವಣ ಪೂಜಾನುಷ್ಠಾನ ನಡೆಸುವರು.
ಶ್ರೀ ರಂಭಾಪುರಿ ಜಗದ್ಗುರುಗಳವರ ಧಾರ್ಮಿಕ ಕಾರ್ಯಕ್ರಮಗಳ ಲಾಭವನ್ನು ಸಮಸ್ತ ಜನತೆ ಪಡೆದುಕೊಳ್ಳಬೇಕೆಂದು ಶ್ರೀ ರಂಭಾಪುರಿ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ್ರ ತಿಳಿಸಿದ್ದಾರೆ.