ಎಲ್.ಎಲ್.ಎಮ್ ಪ್ರಥಮ ವರ್ಷದ ಮುಖ್ಯ ಪರೀಕ್ಷೆ ಕನ್ನಡ ಭಾಷೆಯಲ್ಲಿ ಬರೆಯಲು ಅವಕಾಶ ಕಲ್ಲ್ಪಿಸಲು ಕೋರಿಕೆ.
ಧಾರವಾಡ 16 : ಎಲ್.ಎಲ್.ಎಮ್ ಪ್ರಥಮ ವರ್ಷದ ಮುಖ್ಯ ಪರೀಕ್ಷೆ ಅಂತರಿಕ ಪರೀಕ್ಷೆಗಳನ್ನು ಕನ್ನಡ ಮಾಧ್ಯಮದಲ್ಲಿ ಬರೆಯಲು ಅವಕಾಶ ನೀಡಬೇಕೆಂದು ಕರ್ನಾಟಕ ಕಾನೂನು ವಿದ್ಯಾರ್ಥಿಗಳ ಸಂಘ ಜಿಲ್ಲಾಧ್ಯಕ್ಷ
ವಿಜಯಕುಮಾರ ಕೆ. ಕೊಳ್ಳಾನಟ್ಟಿ ಮನವಿಮಾಡಿದರು
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು
ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದ್ದು, ಐ.ಎ.ಎಸ್. ಕೆ.ಎ.ಎಸ್ ನಂತಹ ಉನ್ನತ ಮಟ್ಟದ ಪರೀಕ್ಷೆಗಳನ್ನು ಅಲ್ಲದೇ ಕೇಂದ್ರ ಸರ್ಕಾರದ ಹಲವು ಹುದ್ದೆಗಳಿಗೆ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಕರ್ನಾಟಕದ ವಿಶ್ವವಿದ್ಯಾಲಯಗಳಲ್ಲಿ ಸಾಮಾಜಿಕ ವಿಜ್ಞಾನದ ಎಲ್ಲ ವಿಷಯಗಳನ್ನು ಮತ್ತು ಸಂಶೋಧನಾ ಪ್ರಬಂಧ (ಪಿ.ಎಚ್.ಡಿ) ಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶವಿದೆ. ನ್ಯಾಯಾಲಯದ ಕಲಾಪಗಳು ಕನ್ನಡದಲ್ಲಿ ನಡೆಯುತ್ತಿವೆ ಕನ್ನಡದಲ್ಲಿ ತೀರ್ಪು ನೀಡುವ ನ್ಯಾಯಾದಿಕರಿಗೆ ಸನ್ಮಾನ ಸಹ ಮಾಡಲಾಗುತ್ತಿದೆ. ಸಿವಿಲ್ ನ್ಯಾಯಾದೀಶರ ಪರೀಕ್ಷೆ ಮತ್ತು ಇತರ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶವಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಮಾತೃ ಭಾಷೆಯಲ್ಲಿ ಸ್ನಾತಕೋತ್ತರ ಕಾನೂನು ಪರೀಕ್ಷೆ ಬರೆಯಲು ಅವಕಾಶವಿದೆ.
ಆದಕಾರಣ ಮೇಲಿನ ಎಲ್ಲಾ 2023-24 ಎಲ್.ಎಲ್.ಎಮ್ ಪ್ರಥಮ ವರ್ಷದ ಸ್ನಾತಕೋತ್ತರ ಕಾನೂನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯ ಪರೀಕ್ಷೆ ಮತ್ತು ಆಂತರಿಕ ಪರೀಕ್ಷೆಗಳನ್ನು ಕನ್ನಡ ಮಾಧ್ಯಮದಲ್ಲಿ ಬರೆಯಲು ಅನುವು ಮಾಡಿಕೊಡುವಂತೆ ರಾಜ್ಯ ಸರ್ಕಾರಕ್ಕೆ ವಿನಂತಿಸಿದರು.
ಪತ್ರಿಕಾಗೋಷ್ಟಿಯಲ್ಲಿ ರಾಜ್ಯಾಧ್ಯಕ್ಷ ಡಾ ಮಂಜುನಾಥ ಹೂಂಗಲದ,ರಾಜ್ಯ ಕಾಯ೯ದಶಿ೯ ತೂಸಿಪ್, ಹಾಗೂ ಕಿರಣ ರೆಡ್ಡಿ ಅಮೀತ ಪಾಟೀಲ ಇದ್ದರು .