ಧಾರವಾಡ : ಇಲ್ಲಿನ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಸಂಸ್ಕರಣ ಸಹಕಾರಿ ಸಂಘದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸೋಮವಾರ ಜರುಗಿತು.
ಅಧ್ಯಕ್ಷ ಸ್ಥಾನಕ್ಕೆ ಸಿದ್ದಪ್ಪ ಪ್ಯಾಟಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅರ್ಜುನ ಪತ್ರೆಣ್ಣವರ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಚುನಾವಣಾಧಿಕಾರಿ ಪಿ.ಮಧುಸೂದನ ಅವರು,
ಸಿದ್ದಪ್ಪ ಪ್ಯಾಟಿ ಮತ್ತು ಅರ್ಜುನ ಪತ್ರೆಣ್ಣವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.
ಸಂಘದ ನಿರ್ದೇಶಕರು ಮತ್ತು ಸಿಬ್ಬಂದಿ ಈ ಸಂದರ್ಭದಲ್ಲಿದ್ದರು.