ಕರ್ನಾಟಕ ಕಲಾ ಕಾಲೇಜಿನ ಪ್ರವಾಸೋದ್ಯಮ ಅಧ್ಯಯನ ವಿಭಾಗ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಜೊತೆ ಒಪ್ಪಂದ :
ಧಾರವಾಡದ ಪ್ರತಿಷ್ಟಿತ ಕರ್ನಾಟಕ ಕಲಾ ಮಹಾವಿದ್ಯಾಲಯದ ಸ್ನಾತಕ/ಸ್ನಾತಕೋತ್ತರ ಪ್ರವಾಸೋದ್ಯಮ ಅಧ್ಯಯನ ವಿಭಾಗವು ಭಾರತದ ಪ್ರತಿಷ್ಠಿತ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಚೆನ್ನೈ ವೃತ್ತ) ದೊಂದಿಗೆ ಶೈಕ್ಷಣಿಕ ಚಟುವಟಕೆಗಳಿಗೆ ಸಹಾಯಕವಾಗಲು ಮತ್ತು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹುಬ್ಬಳ್ಳಿಯ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಜೊತೆ ಒಪ್ಪಂದಕ್ಕೆ ಹುಬ್ಬಳ್ಳಿಯಲ್ಲಿ ಇತ್ತಿಚಿಗೆ ಸಹಿ ಹಾಕಲಾಯಿತು.
ಈ ಮೂಲಕ ವಿದ್ಯಾರ್ಥಿಗಳಿಗೆ 4 ರಿಂದ 20 ವಾರಗಳ ವೃತ್ತಿ ತರಬೇತಿ, ವಿದ್ಯಾರ್ಥಿಗಳಿಗೆ ಇಲ್ಲಿನ ಔದ್ಯೋಗಿಕ ವಾತಾವಾರಣದ ಜ್ಞಾನ, ಮತ್ತು ಅವರ ಉದ್ಯೋಗವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಈ ಒಪ್ಪಂದ ಸಹಕಾರಿಯಾಗಲಿದ್ದು ಈ ಒಪ್ಪಂದವು 5 ವರ್ಷಗಳ ವರೆಗೆ ಒಳಪಟ್ಟಿದ್ದು, ಎಂದು ಪ್ರವಾಸೋದ್ಯಮ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ಜಗದೀಶ ಕಿವುಡನವರ ಹೇಳಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ ಕುಮಾರ ಅವರು ಈ ಸಂದರ್ಭದಲ್ಲಿ ಮಾತನಾಡಿ ಈ ಒಪ್ಪಂದ ದಿಂದ ಪ್ರವಾಸೋದ್ಯಮವನ್ನು ಓದಿದ ಮತ್ತು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಮಾನಯಾನ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗವಕಾಶಗಳಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.
ಇದೇ ಸಂದರ್ಭದಲ್ಲಿ ಹುಬ್ಬಳ್ಳಿಯ ಭಾರತ ವಿಮಾನ ನಿಲ್ದಾಣದ ಪ್ರಾಧಿಕಾರದ ಮ್ಯಾನೇಜರ್ ಪ್ರತಾಪ್ ಮಾತನಾಡಿ ನಾವು ಪ್ರತಿಷ್ಠಿತ ಕರ್ನಾಟಕ ಕಾಲೇಜಿನೊಂದಿಗೆ ಒಪ್ಪಂದ ಮಾಡಿಕೊಂಡಿರುವುದು ಸಂತಸ ತಂದಿದೆಯಲ್ಲದೇ ಕಡಿಮೆ ಶುಲ್ಕದಲ್ಲಿ ಪ್ರವಾಸೋದ್ಯಮ ಪದವಿ ಮತ್ತು ಸ್ನಾತಕೋತ್ತರ ಪದವಿ ಹಾಗೂ ಹೊಟೆಲ್ ಪದವಿ ಪೂರೈಸಿದ ವಿದ್ಯಾರ್ಥಿಗಳು ಈಗಾಗಲೇ ಇಲ್ಲಿ ಉದ್ಯೋಗವಕಾಶ ಗಿಟ್ಟಿಸಿಕೊಂಡಿದ್ದಾರೆ. ಇಂತಹ ಅವಕಾಶಗಳು ಬೇರೆಲ್ಲೂ ಅಪರೂಪವೆಂದು ಮತ್ತು ಅಧ್ಯಾಪಕರು ಈ ನಿಟ್ಟಿನಲ್ಲಿ ಮಕ್ಕಳಿಗೆ ಉದ್ಯೋಗವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಧ್ಯಾಪಕಿ ಡಾ. ಸುಷ್ಮಾ ಮಳಿಗಿ ಮತ್ತು ಏರ್‌ಪೋರ್ಟ್ ಸಿಬ್ಬಂದಿ ಭಾಗಿಯಾಗಿದ್ದರು.
ಕರ್ನಾಟಕ ಕಲಾ ಕಾಲೇಜಿನ ಪ್ರವಾಸೋದ್ಯಮ ಅಧ್ಯಯನ ವಿಭಾಗದ ಜೊತೆಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಈ ಸಂದರ್ಭದಲ್ಲಿ ಎರಡು ಸಂಸ್ಥೆಗಳು ಮುಖ್ಯಸ್ಥರು ವಿನಿಮಯ ಪತ್ರಗಳನ್ನು ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ಕರ್ನಾಟಕ ಕಲಾ ಕಾಲೇಜಿನ ಡಾ. ಜಗದೀಶ್ ಕಿವುಡನವರ, ಹುಬ್ಬಳ್ಳಿಯ ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕ ರೂಪೇಶ ಕುಮಾರ, ಮ್ಯಾನೇಜರ್ ಪ್ರತಾಪ, ಮತ್ತು ಡಾ. ಸುಷ್ಮಾ ಮಳಗಿ ಚಿತ್ರದಲ್ಲಿ ಕಾಣಬಹುದು.