*ಧಾರವಾಡದ ಸೂಪರ್ ಮಾರ್ಕೆಟ್ ಕಾಮಗಾರಿಯ ಪ್ರಗತಿ ಪರಿಶೀಲಿಸಿದ ಸಚಿವ ಲಾಡ್*
==============
*ಇಂದಿರಾ ಕ್ಯಾಂಟೀನ್. ಶೌಚಾಲಯ ವ್ಯವಸ್ಥೆಗೆ ಸಚಿವರ ಸೂಚನೆ*
ಧಾರವಾಡ, ಸೆಪ್ಟೆಂಬರ್ 11: ಇಲ್ಲಿನ ಸೂಪರ್ ಮಾರ್ಕೆಟ್ ಕಾಮಗಾರಿಯ ಪ್ರಗತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಪರಿಶೀಲಿಸಿದರು.
ಈ ವೇಳೆ ಅಲ್ಲಿನ ವ್ಯಾಪಾರಿಗಳಿಂದ ಅಹವಾಲುಗಳನ್ನು ಸಚಿವರು ಸ್ವೀಕರಿಸಿದರು.
ಮಾರುಕಟ್ಟೆಯನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು. ಶೆಡ್‌ನ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ವ್ಯಾಪಾರಿಗಳಿಗೆ ಭರವಸೆ ನೀಡಿದರು.
ಮಾರುಕಟ್ಟೆಯಲ್ಲಿ ಇಂದಿರಾ ಕ್ಯಾಂಟೀನ್ ವ್ಯವಸ್ಥೆ ಮಾಡಲಾಗುವುದು. ಶೌಚಾಲಯವನ್ನೂ ಡಿಸೆಂಬರ್ ಒಳಗೆ ವ್ಯಾಪಾರಿಗಳಿಗೆ ಬೇಕಾದ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಶೆಡ್ ಮಾಡಿಕೊಡಬೇಕು ಎಂದು ಸಚಿವರಿಗೆ ಮನವಿ ಸಲ್ಲಿಸಿದೆವು. ಅದಕ್ಕೆ ಸ್ಪಂದಿಸಿದ ಸಚಿವರಿಗೆ ಧನ್ಯವಾದಗಳು. ನಮ್ಮ ಕುಂದುಕೊರತೆ ಆಲಿಸಿದ ಸಚಿವರಿಗೆ ಧನ್ಯವಾದಗಳು ಎಂದು ವ್ಯಾಪಾರಸ್ಥರು ತಿಳಿಸಿದರು.
ಈ ವೇಳೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ, ಪಾಲಿಕೆ ಆಯುಕ್ತರು, ಮುಖಂಡರಾದ ಶ್ರೀಮತಿ ಶಿವಲೀಲಾ ವಿನಯ್ ಕುಲಕರ್ಣಿ ಹಾಗೂ ಹಲವು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.