ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ ಶಾಸಕ ಶ್ರೀ ಅರವಿಂದ್ ಬೆಲ್ಲದ.



ಧಾರವಾಡ:--- ಒಳಮೀಸಲಾತಿ ಕಲ್ಪಿಸುವ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟಕ್ಕೆ  ಸಂಪೂರ್ಣ ಬೆಂಬಲವಿದೆ
 ಎಂದು ವಿಧಾನಸಭೆಯ ವಿರೋಧಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು,
 ಸರ್ವೋಚ್ಚ ನ್ಯಾಯಾಲಯದ  ಆದೇಶದಂತೆ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು  ರಾಜ್ಯ ಸರ್ಕಾರ ಕೂಡಲೇ ಜಾರಿ ಮಾಡಬೇಕು.
ದೇಶಾದ್ಯಂತ ದಲಿತಪರ ಸಂಘಟನೆಗಳು ಸುಮಾರು ೩೦ ವರ್ಷಗಳಿಂದ ನಡೆಸುತ್ತಿರುವ ಹೋರಾಟದ ಫಲವಾಗಿ  ಸರ್ವೋಚ್ಚ ನ್ಯಾಯಾಲಯ ಕೂಡ ಒಳಮೀಸಲಾತಿ ಆದೇಶವನ್ನು ಎತ್ತಿಹಿಡಿದು, ಆಯಾ ರಾಜ್ಯಗಳಿಗೆ ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರವನ್ನು ನೀಡಿದೆ.
  ನ್ಯಾಯಾಲಯದ ಆದೇಶದನ್ವಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಹಾಗೂ ದಲಿತಪರ ಸಂಘಟನೆಗಳಿಂದ ಧಾರವಾಡದಲ್ಲಿ ಒಳಮೀಸಲಾತಿ ಜಾರಿಗಾಗಿ ನಾಳೆ ನಡೆಯುವ ಬೃಹತ್ ಪ್ರತಿಭಟನಾ ಹೋರಾಟಕ್ಕೆ  ಸಂಪೂರ್ಣವಾಗಿ ಬೆಂಬಲ ನೀಡುವುದಾಗಿ ಬೆಲ್ಲದ ಅವರು ಹೇಳಿದ್ದಾರೆ.
ನವೀನ ಹಳೆಯದು

نموذج الاتصال