*ಛಾಯಾಚಿತ್ರ ಶೀರ್ಷಿಕೆ:*
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಭವನದಲ್ಲಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ನಮಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸೇರಿದಂತೆ ರೆಡ್ಡಿ ಸಮುದಾಯದ ಮುಖಂಡರು, ಸದಸ್ಯರು, ಸಾರ್ವಜನಿಕರು, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.