28 ಕ್ಕೆ ಪ್ರತಿಭಾ ಪುರಸ್ಕಾರ ಹಾಗೂ ಪರಿಸರ ದಿನಾಚರಣೆ- ಸಾಂಸ್ಕೃತಿಕ ಕಾರ್ಯಕ್ರಮಗಳು.
ಧಾರವಾಡ 27 : (ಮಸಾಪ ವಾರ್ತೆ) ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಧಾರವಾಡ, ಕರ್ನಾಟಕ ಸಂಗ್ರಾಮ ಸೇನೆ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ೨೦೨೪-೨೫ನೇ ಸಾಲಿನ ಎಸ್, ಎಸ್, ಎಲ್, ಸಿ,ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ
ಅಭಿನಂದನಾ ಕಾರ್ಯಕ್ರಮವನ್ನು ಜೂನ್ 28 ರಂದು ಬೆಳಿಗ್ಗೆ 10 ಗಂಟೆಗೆ ಸಾಂಸ್ಕೃತಿಕ ಸಮುಛ್ಛಯ ರಂಗಾಯಣ ಧಾರವಾಡದಲ್ಲಿ ಆಯೋಜಿಸಲಾಗಿದೆ. ಎಂದು
ಸಂಜೀವ ದುಮಕನಾಳ ಜಿಲ್ಲಾಧ್ಯಕ್ಷರು ಮಕ್ಕಳ ಸಾಹಿತ್ಯ ಪರಿಷತ್ತು, ಇವರು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
**