DHARWAD:ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚೆ ಮಾಡಲಾಯಿತು.

*ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರಿಂದ ಸಭೆ* 
ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ* 
====================
ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌  ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. 
*ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ* 
 ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ.  ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು. ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಈ ವೇಳೆ ಆಡಳಿತ ಮಂಡಳಿಯವರಿಗೆ ಸಚಿವರು ಸೂಚಿಸಿದರು.  
ಗೃಹ ಕಾರ್ಮಿಕರ ಸಮಸ್ಯೆ ಚರ್ಚೆ* 
ಕರ್ನಾಟಕ ಗೃಹ ಕಾರ್ಮಿಕರ ವೇದಿಕೆ ಬೆಂಗಳೂರು ಇವರ ಮನವಿ ಮೇರೆಗೆ ಸಚಿವ ಲಾಡ್‌ ಅವರು, ಗೃಹ ಕಾರ್ಮಿಕರ ಸಮಸ್ಯೆಗಳ  ಕುರಿತು ಸಭೆ ನಡೆಸಿ ಚರ್ಚಿಸಿದರು.

*ಎಂವಿ ಫೋಟೋ ಒಲ್ಟಾಯಿಕ್ ಪವರ್ ಕಾರ್ಮಿಕರ ಸಮಸ್ಯೆ ಚರ್ಚೆ* 
ಹಾಗೆಯೇ ಎಂವಿ ಫೋಟೋ ಒಲ್ಟಾಯಿಕ್ ಪವರ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. 

ಈ ಎಲ್ಲಾ ಸಭೆಗಳಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲಕೃಷ್ಣ, ಅಪರ ಕಾರ್ಮಿಕ ಆಯುಕ್ತರಾದ ಡಾ. ಮಂಜುನಾಥ್, ಜಂಟಿ ಕಾರ್ಮಿಕ ಆಯುಕ್ತರಾದ ಶ್ರೀ ರವಿಕುಮಾರ್, ಗೃಹ ಕಾರ್ಮಿಕ ವೇದಿಕೆಯ ಪ್ರಮುಖರು, ಕಂಪನಿಯ ಆಡಳಿತ ಮಂಡಳಿ ಮುಖ್ಯಸ್ಥರು, ಕಾರ್ಮಿಕ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು
ನವೀನ ಹಳೆಯದು

نموذج الاتصال